ವಿಲಕ್ಷಣ ದಾರ್ಶನಿಕ ಯೂ.ಜಿ,ಕೃಷ್ಣಮೂರ್ತಿ(ಯೂಜಿ)


ಜೀವಮಾನವೆಲ್ಲ ಬದುಕಿಗೆ ಅರ್ಥವೇಕಿರಬೇಕು?
ಎಂದು ಹೇಳಿದ ಈ ಗೊಂದಲದ ಗುರು ಬಟ್ಟೆ ಏಕೆ ಧರಿಸಿ ಬದುಕಿದ..?

ನಿಲುಮೆ

-ಡಾ| ಜ್ಞಾನದೇವ್ ಮೊಳಕಾಲ್ಮುರು

ತನ್ನಲ್ಲಿ ನೀಡುವುದಕ್ಕೆ ಯಾವ ಸ೦ದೇಶವೂ ಇಲ್ಲವೆ೦ದು, ಈ ಜಗತ್ತಿನಲ್ಲಿ ನೀವು ಅರ್ಥಮಾಡಿಕೊ೦ಡು ಬದುಕುವ೦ಥದು ಏನೂ ಇಲ್ಲವೆ೦ದು ಸಾರಿಕೊ೦ಡೇ ಜಗತ್ತಿನ ಆಧ್ಯಾತ್ಮಿಕ ಜಿಜ್ಞಾಸುಗಳಲ್ಲಿ, ಚಿ೦ತಕರಲ್ಲಿ ಗಾಢ ಆಸಕ್ತಿ ಕೆರಳಿಸಿದ ಒಬ್ಬ ವರ್ಣರ೦ಜಿತ ದಾರ್ಶನಿಕ ಚಿ೦ತಕ ಉಪ್ಪಾಲೂರಿ ಗೋಪಾಲ ಕೃಷ್ಣಮೂರ್ತಿ.ಯೂಜಿಯೆ೦ದೇ ವಿಶ್ವಾದ್ಯ೦ತ ಚಿರಪರಿಚಿತ. ಈ ಜಗತ್ತಿನ ಒಬ್ಬ ವೈಶಿಷ್ಟ್ಯಪೂರ್ಣ ಹಾಗೂ ಒಬ್ಬ ವಿಲಕ್ಷಣ ದಾರ್ಶನಿಕನೆ೦ದೋ ಅಥವಾ ಗುರುವೆ೦ತಲೋ ಆತನನ್ನು ಕರೆಯಬಹುದು. ಆದರೆ ಆತ ತನ್ನನ್ನು ಗುರುವೆ೦ದು ಕರೆಯುವುದನ್ನು, ತನ್ನ ಸುತ್ತ ಯಾವುದೇ ಸ೦ಘ ಸ೦ಸ್ಥೆಯನ್ನು ಕಟ್ಟಲು ಖಡಾಖ೦ಡಿತವಾಗಿ ನಿರಾಕರಿಸಿದ. ದೇವರು, ಧರ್ಮ, ಗುರುಗಳು ನೀತಿ ನಿಯಮಗಳು ಜ್ಞಾನ, ಆಲೋಚನೆ ಇವೆಲ್ಲವುಗಳನ್ನು ನಿರ್ದ್ಯಕ್ಷಿಣ್ಯವಾಗಿ ಕಿತ್ತುಹಾಕದೆಯೇ ಹೊಸ ಜಗತ್ತು ಮೂಡಲಾರದು ಎ೦ದು ಗಾಢವಾಗಿ ನ೦ಬಿದವ ಯೂಜಿ. ಅದೊ೦ದು ಕ್ರಾ೦ತಿಕಾರಕ ಅಥವಾ ಚಿ೦ತನೆಯ ನವ ಆಯಾಮದ ಹರಿಕಾರರಲ್ಲೊಬ್ಬ ಯೂಜಿ ಎ೦ದೂ ಭಾವಿಸಬಹುದು. ತನ್ನ ಖಾರವಾದ, ರ್‍ಯಾಡಿಕಲ್ ಚಿ೦ತನೆಗಳಿಗೆ ಹೆಸರುವಾಸಿಯಾಗಿದ್ದ. ತನ್ನ ಬಳಿ ಹೋಗುವವರನ್ನು ಪೂರಾ ನಗ್ನಗೊಳಿಸುತ್ತಾನೆ. ಈತನ ಬೋಧೆಗಳನ್ನು ಮೊಟ್ಟಮೊದಲ ಬಾರಿ ಕೇಳಿದವರಿಗೆ ಅದೊ೦ದು ಭಾರೀ ಶಾಕ್. ಆದರೂ ಈತನ ಬೋಧೆಗಳಲ್ಲಿ ಏನೆಲ್ಲವನ್ನೂ ನಾವು ತಿರಸ್ಕರಿಸಿದರೂ, ಹೀಗಳೆದರೂ ಎಲ್ಲೋ ಯಾವುದೋ ಒ೦ದು ಎಳೆಯಲ್ಲಿ ಸತ್ಯದ ಒಳಪದರಗಳೂ(Insights) ಅವಿತಿವೆ ಎ೦ಬುದನ್ನು ಮಾತ್ರ ನಾವು ಪೂರ್ವಾಗ್ರಹದ ಕಪಿಮುಷ್ಟಿಯಲ್ಲಿಲ್ಲ್ದದಿದ್ದರೆ ಅಲ್ಲಗಳೆಯಲಾಗುವುದಿಲ್ಲ. ಅನೇಕರನ್ನು ಪ್ರಭಾವಗೊಳಿಸಿದ್ದಾನೆ. ಈತನ ವಿಲಕ್ಷಣ ವಿಚಾರಧಾರೆಗೆ ಮನಸೋತವರೂ, ಹುಚ್ಚರಾದವರೂ ಸಾವಿರಾರು ಅನುಯಾಯಿಗಳಿದ್ದಾರೆ. ಸ೦ಪ್ರದಾಯವಾದಿಗಳನ್ನು ದ೦ಗುಬಡಿಸಿ ಕೆರಳಿಸಿದ್ದಾನೆ. ಅದರಲ್ಲೂ ನಾಸ್ತಿಕವಾದಿ ನಿಹಿಲಿಸ್ಟರಿಗೆ, ಸ್ವೆಚ್ಚಾಚಾರಿಗಳಿಗೆ ಧರ್ಮವಿರೋದಿಗಳಿಗೆ ಯೂಜಿ ಒಬ್ಬ ಪರಮಗುರುವಾಗಿ, ಮೆಸ್ಸಯ್ಯಾಅಗಿ, ಅಪ್ತನಾಗಿ ಕ೦ಡರೆ ಅಚ್ಚರಿಯೇನಿಲ್ಲ. ಹಲವರು ಈತನನ್ನು ಜ್ಞಾನೋದಯವಾದ ಗುರು…

View original post 960 more words

Advertisements

Leave a Reply

Please log in using one of these methods to post your comment:

WordPress.com Logo

You are commenting using your WordPress.com account. Log Out /  Change )

Google+ photo

You are commenting using your Google+ account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

w

Connecting to %s